Anthu

140.00

‘ಅಂತು’ ಎಂಬ ಶಬ್ದದ ಎಲ್ಲ ಸಾಧ್ಯತೆಗಳನ್ನೂ ಅರ್ಥಪೂರ್ಣವಾಗಿ ಧ್ವನಿಸುವ ಈ ಕಾದಂಬರಿಯು, ತನ್ನ ವಸ್ತು ಮತ್ತು ಕಥನತಂತ್ರ ಎರಡೂ ದೃಷ್ಟಿಗಳಿಂದ ಕನ್ನಡ ಕಾದಂಬರಿಲೋಕಕ್ಕೆ ಒಂದು ವಿಶಿಷ್ಟ, ಮೌಲಿಕ ಸೇರ್ಪಡೆ. ಸದ್ಯದ ಅತ್ಯಾಧುನಿಕವಾದ ಕಾಪೆರ್Çರೇಟ್ ಜಗತ್ತಿನ ರೋಚಕ ವಿದ್ಯಮಾನಗಳನ್ನು ಲವಲವಿಕೆಯಿಂದ ನಿರೂಪಿಸುತ್ತಲೇ, ಅವುಗಳನ್ನೂ ಮೀರಿದ ನಿತ್ಯಸತ್ಯಗಳನ್ನು ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆ ಇಲ್ಲಿ ಕಂಡುಬರುತ್ತದೆ. ಒಂದು ಕುತೂಹಲಕಾರೀ ಪ್ರಾಜೆಕ್ಟಿನ ಪೂರ್ವಾಪರಗಳನ್ನು ಪತ್ತೇದಾರೀ ಶೈಲಿಯಲ್ಲಿ ಶೋಧಿಸುವಂತೆ ಆರಂಭವಾಗುವ ಈ ಬರಹವು ಕ್ರಮೇಣ ಹುಟ್ಟು-ಸಾವು-ಪುನರ್ಜನ್ಮಗಳಂಥ ಗಂಭೀರ ಪ್ರಶ್ನೆಗಳಿಗೆ ಎದುರಾಗಿ ತಾತ್ವಿಕ ಎತ್ತರಗಳಿಗೆ ಬೆಳೆಯುವ ಪರಿ ಗಮನಾರ್ಹವಾಗಿದೆ. ಕನ್ನಡನಾಡಿನಿಂದ ಬಹುದೂರದ ಅಮೆರಿಕಾದಲ್ಲಿ, ತೀರಾ ಭಿನ್ನವಾದ ಪಾತ್ರ-ಭಾಷೆ-ಔದ್ಯಮಿಕ ಪರಿಸರದಲ್ಲಿ ಸೃಷ್ಟಿಯಾಗುವ ಅನುಭವವನ್ನು ಕನ್ನಡ ಭಾಷೆಯಲ್ಲಿ ಒಳಗೊಳ್ಳುವ ಈ ಸೃಜನಶೀಲ ಪ್ರಯೋಗವು ಕನ್ನಡ ಸಾಹಿತ್ಯವು ಹಿಗ್ಗುತ್ತಿರುವ ಬಗೆಯನ್ನೂ ಕಾಣಿಸುತ್ತ ಆಸಕ್ತಿ ಹುಟ್ಟಿಸುತ್ತದೆ. ತನ್ನ ಸ್ಮೃತಿಗಳಲ್ಲಿ ಜತನದಿಂದ ಕಾಪಿಟ್ಟುಕೊಂಡಿರುವ ಸ್ಥಳೀಯ ತಿಳಿವಳಿಕೆಯನ್ನು ಆಧುನಿಕ ಲೋಕಕ್ಕೆ ಮುಖಾಮುಖಿಯಾಗಿಸಿ ಕಥನ ಪ್ರಕ್ರಿಯೆಯನ್ನು ಸತ್ಯದ ಶೋಧವಾಗಿ ವಿಸ್ತರಿಸುವ ಪ್ರಯತ್ನದಲ್ಲಿ ಪ್ರಕಾಶ್ ನಾಯಕರು ಸಾಕಷ್ಟು ಯಶಸ್ವಿಯಾಗಿದ್ದಾರೆ. ‘ಅಂತು’ ನಿಸ್ಸಂದೇಹವಾಗಿ ಈ ದಶಕದ ಮುಖ್ಯ ಕನ್ನಡ ಕಾದಂಬರಿಗಳ ಸಾಲಿನಲ್ಲಿ ನಿಲ್ಲುವಂಥದ್ದು.

– ಟಿ. ಪಿ. ಅಶೋಕ

Check on Google Playstore

Category:

Reviews

There are no reviews yet.

Be the first to review “Anthu”

Your email address will not be published. Required fields are marked *

Scroll to top