Mithuna

85.00

ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.

Check on Google Playstore

Category:

ABOUT THE AUTHOR

1952ರಲ್ಲಿ ಸೀಮಾಂಧ್ರದ ತೆನಾಲಿಯಲ್ಲಿ ಜನನ. ತೆಲುಗಿನ ‘ಆಂಧ್ರಜ್ಯೋತಿ’ಯ ‘ನವ್ಯ’ ವಾರಪತ್ರಿಕೆಗೆ ಸಾಕಷ್ಟು ವರ್ಷಗಳ ಕಾಲ ಸಂಪಾದಕರಾಗಿ ಕೆಲಸ ಮಾಡಿ, ಈಗ ದೃಶ್ಯಮಾಧ್ಯಮದ ಸಂಸ್ಥೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಂಕಣಕಾರರಾಗಿಯೂ ಜನಪ್ರಿಯರಾಗಿರುವ ಇವರು, ಹತ್ತಕ್ಕೂ ಹೆಚ್ಚು ಅಂಕಣಸಂಗ್ರಹಗಳನ್ನು ಪ್ರಕಟಿಸಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಸಿನಿಮಾರಂಗದಲ್ಲೂ ಬರಹಗಾರರಾಗಿ ಹೆಸರು ಮಾಡಿದ್ದಾರೆ. ‘ಮಿಥುನ’ ಕತೆಗೆ ದೆಹಲಿನ ‘ಕಥಾ ಪ್ರಶಸ್ತಿ’ ಸಿಕ್ಕಿದೆ. ಇದೇ ಕತೆಯನ್ನು ಆಧರಿಸಿ ಇತ್ತೀಚೆಗೆ ತೆಲುಗಿನಲ್ಲಿ ನಿರ್ಮಿಸಿದ ‘ಮಿಥುನಂ’ ಚಲನಚಿತ್ರವು ಜನಮನ್ನಣೆ ಗಳಿಸಿದೆ. ಈ ಕಥಾಸಂಕಲನದ ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ತೆಲುಗಿನಲ್ಲಿ ಮಾರಾಟವಾಗಿವೆಯೆಂಬುದು ಇದರÀ ಜನಪ್ರಿಯತೆಯನ್ನು ಹೇಳುತ್ತದೆ.

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. NITK ಸುರತ್ಕಲ್‍ನಿಂದ ಇಂಜಿನಿಯರಿಂಗ್ ಮತ್ತು IISc ಬೆಂಗಳೂರಿನಿಂದ ಎಂ.ಇ. ಪದವಿ ಪಡೆದಿದ್ದಾರೆ. 20 ವರ್ಷಗಳ ಕಾಲ ಸಾಫ್ಟ್‌ವೇರ್ ಪ್ರಪಂಚದಲ್ಲಿ ಕೆಲಸ ಮಾಡಿ, ಈಗ ತಮ್ಮ ಸಮಯವನ್ನು ಪ್ರವಾಸ, ಓದು ಮತ್ತು ಬರಹಗಳಿಗೆ ಬಳಸುತ್ತಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ದ.ರಾ. ಬೇಂದ್ರೆ ಕಥಾ ಪ್ರಶಸ್ತಿ, ಮಾಸ್ತಿ ಕಥಾ ಪುರಸ್ಕಾರ, ಡಾ. ಯು. ಆರ್. ಅನಂತಮೂರ್ತಿ ಪ್ರಶಸ್ತಿ, ಬೆಸಗರಹಳ್ಳಿ ರಾಮಣ್ಣ ಪ್ರಶಸ್ತಿ, ವಸುದೇವ ಭೂಪಾಲಂ ದತ್ತಿನಿಧಿ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಪ್ರಶಸ್ತಿ, ಸೇಡಂನ ‘ಅಮ್ಮ’ ಪ್ರಶಸ್ತಿ ಮತ್ತು ಕಥಾರಂಗಂ ಪ್ರಶಸ್ತಿಗಳನ್ನು ಪಡೆದಿದ್ದಾರೆ. ‘ಛಂದ ಪುಸ್ತಕ’ ಎಂಬ ಪ್ರಕಾಶನ ಸಂಸ್ಥೆಯನ್ನು ಪ್ರಾರಂಭಿಸಿ, ಅದರ ಮೂಲಕ ನಾಡಿನ ಹಲವು ಹೊಸ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಆ ಪುಸ್ತಕಗಳ ಜೊತೆಗೆ, ತಮ್ಮ ಪುಸ್ತಕಗಳ ಮುದ್ರಣ ಮತ್ತು ಮಾರಾಟವನ್ನು ಸ್ವತಃ ನೋಡಿಕೊಳ್ಳುತ್ತಾರೆ.

ಚಾರಣದಲ್ಲಿ ವಿಶೇಷ ಆಸಕ್ತಿಯಿರುವ ಇವರು ನಮ್ಮ ಪಶ್ಚಿಮ ಘಟ್ಟದ ಕಾಡಿನಲ್ಲಿರುವ ಹಲವು ಬೆಟ್ಟಗಳನ್ನೂ, ತಾಂಜಾನಿಯಾ ದೇಶದಲ್ಲಿರುವ ಕಿಲಿಮಂಜಾರೋ ಪರ್ವತವನ್ನೂ ಮತ್ತು ಹಿಮಾಲಯದಲ್ಲಿರುವ ಹಲವಾರು ಪರ್ವತಗಳನ್ನೂ ಹತ್ತಿದ್ದಾರೆ. ಟಿಬೇಟಿನಲ್ಲಿರುವ ಕೈಲಾಶ ಮತ್ತು ಮಾನಸ ಸರೋವರದ ಚಾರಣವನ್ನು ಮಾಡಿದ್ದಾರೆ. ಸ್ಕ್ವಾಷ್ ಆಟ, ಮಹಾಭಾರತದ ಅಧ್ಯಯನ ಮತ್ತು ಶಾಸ್ತ್ರೀಯ ಸಂಗೀತವನ್ನು ಕೇಳುವುದು ಇವರ ಇತರ ಹವ್ಯಾಸಗಳು.

vas123u@rocketmail.com

Mithuna

Reviews

There are no reviews yet.

Be the first to review “Mithuna”

Your email address will not be published. Required fields are marked *

Scroll to top